District News

ಪ್ರಹ್ಲಾದ ಜೋಶಿ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ: ಕ್ರಮಕ್ಕೆ ಬಿಜೆಪಿ ಎಸ್‌ಟಿ ಮೋರ್ಚಾ ಮನವಿ

Share Below Link

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ಕಬ್ಬು ಬೆಳೆಗಾರರ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಶಶಿಕಾಂತ್ ಗುರೂಜಿ ಅವರು ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ಸಾರ್ವಜನಿಕ ವೇದಿಕೆಯಲ್ಲಿ ಸಚಿವರ ವಿರುದ್ಧ ತೀವ್ರ ಅವಹೇಳನಕಾರಿ ಮಾತುಗಳನ್ನು ಆಡಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್. ಹರೀಶ್, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಜಿ. ಹಾಗೂ ಇತರ ಪದಾಧಿಕಾರಿಗಳು, ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *