District NewsLatest NewsState News

ಮೀಸಲಾತಿ ಬಲಪಡಿಸಲು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲಿ: ವಿ.ಎಸ್.ಉಗ್ರಪ್ಪ ಆಗ್ರಹ

Share Below Link

ಶಿವಮೊಗ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಇರುವ ಮೀಸಲಾತಿ ಪ್ರಮಾಣ ಗಟ್ಟಿಗೊಳಿಸಲು ಮತ್ತು ಅದು ಜಾರಿಗೆ ತರಲು ಅನುಕೂಲವಾಗುವಂತೆ ಸಂವಿಧಾನದ 9ನೇ ಪರಿಚ್ಛೇದಕ್ಕೆ ಅಳವಡಿಸಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.

ಅವರು ಇಂದು ಪತ್ರಕಾಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಇರುವ ಮೀಸಲಾತಿಯನ್ನು ಕಳೆದ ಬಿಜೆಪಿ ಸರ್ಕಾರದಲ್ಲಿಯೇ ಶೇ.56ಕ್ಕೆ ಹೆಚ್ಚಿಸಲಾಗಿತ್ತು. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿಯೂ ಕೂಡ ರಾಜ್ಯ ಸರ್ಕಾರ ಇದನ್ನು ಒಪ್ಪಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಇದು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸದ ಹೊರತು ಅದು ಜಾರಿಯಾಗುವುದಿಲ್ಲ. ಇದರಿಂದ ಕೋಟ್ಯಾಂತರ ಎಸ್ಟಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯವಾದಂತಾಗುತ್ತದೆ ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರೆಡೂ ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ ಸಂವಿಧಾನದ 9ನೇ ಪರಿಚ್ಛೇದಕ್ಕೆ ಇದನ್ನು ಸೇರಿಸಬೇಕು, ಪ್ರಧಾನಮಂತ್ರಿ ಮೋದಿಯವರಿಗೆ ಹಿಂದುಳಿದವರ ಬಗ್ಗೆ ಕಾಳಜಿ ಇದ್ದರೆ ತಕ್ಷಣವೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಈ ಬಗ್ಗೆ ಸತ್ಯಶೋಧನಾ ವರದಿ ನೀಡಲು ತಮಗೆ ಪಕ್ಷ ಜವಾಬ್ದಾರಿ ನೀಡತ್ತಲ್ಲಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗವೂ ಸೇರಿದಂತೆ ರಾಜ್ಯದೆಲ್ಲೆಡೆ ಪ್ರವಾಸಮಾಡಿ ಸತ್ಯದ ವರದಿಯನ್ನೇ ಹೈಕಮಾಂಡ್‌ಗೆ ಕಳಿಸಿದ್ದೇನೆ. ಅದು ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಕೈಗೂ ಸಿಕ್ಕಿದೆ. ಇದಷ್ಟೇ ನನ್ನ ಜವಾಬ್ದಾರಿ. ವರದಿಯನ್ನು ನೋಡಿ ಕ್ರಮ ತೆಗೆದುಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟಿದ್ದು.

ಮೀಸಲಾತಿ ಎಂಬುದು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ನಮ್ಮನ್ನು ಎರಡನೇ ದರ್ಜೆಯ ನಾಗರೀಕರಂತೆ ನೋಡುವುದು ಬೇಡ. ಬಸವರಾಜ್ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ಎಸ್ಸಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಎಸ್ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇ.32ಕ್ಕೆ ಏರಿಸಿತ್ತು. ಇದಕ್ಕೆ ಬಿಜೆಪಿಯ ನಾಯಕರುಗಳಾದ ಬಿ.ಎಸ್. ಯಡಿಯೂರಪ್ಪ, ಬಿ.ವೈ. ರಾಘವೇಂದ್ರ, ವಿಜಯೇಂದ್ರ ಸೇರಿದಂತೆ ಎಲ್ಲರೂ ಈಗ ಬಾಯಿಬಿಡಬೇಕಾಗಿದೆ. ಅವರ ಆಶಯದಂತೆ ತಕ್ಷಣವೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದರು.

ಯಾವುದೇ ಮೀಸಲಾತಿಯನ್ನು ನೀಡುವಾಗ ಕುಲಶಾಸ್ತಿçÃಯ ಅಧ್ಯಯನ ಕಡ್ಡಾಯವಾಗಿರುತ್ತದೆ. ನಾನು ಯಾರಿಗೆ ಬೇಕಾದರೂ ಮೀಸಲಾತಿ ನೀಡಲಿ ಬೇಡ ಎನ್ನುವುದಿಲ್ಲ. ಎಲ್ಲಾ ಸಮಾಜದವರು ಕೂಡ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದೆ ಉಳಿದಿರುತ್ತಾರೆ. ಕುಲಶಾಸ್ತçದ ಅಧ್ಯಯನದಿಂದ ಯಾರಿಗೆ ಮೀಸಲಾತಿ ಎಷ್ಟು ಪ್ರಮಾಣದಲ್ಲಿ ಕೊಡಬೇಕು ಎಂಬುದು ಗೊತ್ತಾಗುತ್ತದೆ. ಆದರೆ ಮೀಸಲಾತಿ ಜಾರಿಮಾಡುವಾಗ, ಹೊಸದಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸದಾಗ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಕೂಡ ಹೆಚ್ಚಿಸಬೇಕಾದುದು ಅನಿವರ‍್ಯ ಎಂದರು.

ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದ್ದರೂ ಕೂಡ ಅದೇ ಸುಪ್ರೀಂಕೋರ್ಟ್ ಯಾವ ಸಮುದಾಯಕ್ಕೆ ಅನ್ಯಾಯವಾಗಿರುತ್ತದೆಯೋ ಅವರಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಹೇಳಿದೆ. ಕೆಲವು ರಾಜ್ಯಗಳು ಮೀಸಲಾತಿ ಪ್ರಮಾಣವನ್ನು ಶೇ.69ರಷ್ಟು ಹೆಚ್ಚಿಸಿವೆ. ಅದೇ ಮಾದರಿಯಲ್ಲಿ ಮೀಸಲಾತಿಯನ್ನು ಕೂಡ ಹೆಚ್ಚಿಸಬೇಕು ಎಂದರು.

ಮೀಸಲಾತಿ ಸಂಬAಧ ಪ್ರಧಾನಿ ನರೇಂದ್ರಮೋದಿಯವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಯನ್ನು ಮರೆತಿದೆ, ರಾಜ್ಯ ಸರ್ಕಾರ ಕೂಡ ಇದನ್ನು ನಿರ್ಲಕ್ಷö್ಯವಹಿಸಬಾರದು. ನಮ್ಮ ಹಕ್ಕುಗಳಿಗೆ ರಕ್ಷಣೆ ಪಡೆಯಲು ನಮ್ಮ ಸಮುದಾಯದವರು ಮುಂದಾಗಬೇಕಾಗಿದೆ. ಕುರುಬರೂ ಸೇರಿದಂತೆ ಯಾವುದೇ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನನ್ನ ವಿರೋಧವಿಲ್ಲ. ಅವರಿಗೆ ಮೀಸಲಾತಿ ನೀಡಬಾರದು ಎಂದು ನಾನು ಹೇಳಿಯೂ ಇಲ್ಲ. ಈ ಬಗ್ಗೆ ಅಪಪ್ರಚಾರ ಸಲ್ಲದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಲಕ್ಷö್ಮಣಪ್ಪ, ಎಸ್ಸಿ-ಎಸ್ಟಿ ವಿಭಾಗದ ಅಧ್ಯಕ್ಷ ಶ್ರೀಧರ್, ಪ್ರಮುಖರಾದ ರಂಗಪ್ಪ, ನೀಲಪ್ಪ, ಕೃಷ್ಣಪ್ಪ, ವೀರೇಶಪ್ಪ, ರಾಜಣ್ಣ, ನಾಗೇಂದ್ರ, ಪ್ರಶಾಂತ್ ಸೇರಿದಂತೆ ಹಲವರಿದ್ದರು.

Leave a Reply

Your email address will not be published. Required fields are marked *